ಪತ್ರಿಕಾ ಪ್ರಕಟಣೆಗಾಗಿ
ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕರ್ನಾಟಕ ಇದರ ಪರಿಕ್ಷಾ ವಿಭಾಗವು ಅಕ್ಟೋಬರ್ 20 ರಂದು ಆಯುಷ್’ನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ನಡೆಸುವುದಾಗಿ ದಿನಾಂಕ 28/09/2020 ರಂದು ಪ್ರಕಟನೆ ಹೊರಡಿಸಿದೆ.ತರಾತುರಿಯಲ್ಲಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡಬಾರದು. ಆ ಕಾರಣಕ್ಕಾಗಿ ಯುನಾನಿ ಮತ್ತು ಆಯುರ್ವೇದ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಬೇಕಾಗಿ ಎಸ್.ಐ.ಓ ಕರ್ನಾಟಕ ಆಗ್ರಹಿಸುತ್ತದೆ.
ಕೊರೋನಾ ರೋಗದ ಸಂಧಿಗ್ದ ಪರಿಸ್ಥಿತಿಯಲ್ಲಿ ಯುನಾನಿ ಮತ್ತು ಆಯುರ್ವೇದದ ಹಲವು ವಿದ್ಯಾರ್ಥಿಗಳು ತರಬೇತಿ ಪಡೆದು ಕೊರೋನಾ ವಾರಿಯರ್ ಆಗಿ ಸೇವೆ ಸಲ್ಲಿಸಿದ್ದರು ಹಾಗೂ ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸ್ವಯಂ ಸೇವಕರಾಗಿ ಅಂತಿಮ ವರ್ಷದ ಯುನಾನಿ ಮತ್ತು ಆಯುವೇರ್ದದ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಂಡಿದ್ದರು.
ಆ ಸಮಯದಲ್ಲಿ ವಿಧ್ಯಾಭ್ಯಾಸ ನಡೆಸಲು ವಿದ್ಯಾರ್ಥಿಗಳಿಗೆ ಸಾಧ್ಯವಾಗದ ಕಾರಣ ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದ್ದು ಈಗಾಗಲೇ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಮುಂದೂಡಲು ಮನವಿ ಮಾಡಿಕೊಂಡಿದ್ದು, ಸರಕಾರ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ.
ಈಗಾಗಲೇ ಹೋಮಿಯೋಪತಿಯ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದ್ದು ಅದರಂತೆ ಯುನಾನಿ ಮತ್ತು ಆಯುರ್ವೇದ ವಿದ್ಯಾರ್ಥಿಗಳ ಸ್ನಾತಕೋತ್ತರ ಪರೀಕ್ಷೆಯನ್ನು ಮುಂದೂಡಿ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು ಸಮಯಾವಕಾಶ ಮಾಡಿಕೊಡಬೇಕೆಂದು ಎಸ್.ಐ.ಓ ಕರ್ನಾಟಕ ಆಗ್ರಹಿಸುತ್ತದೆ.