ವಿದ್ಯಾರ್ಥಿಗಳ ಅಫಘಾತವಾದ ವಸತಿ ನಿಲಯಕ್ಕೆ ಅಬ್ದುಲ್ ಹನ್ನಾನ್ ಭೇಟಿ

Share Post

ಗೂಡ್ಸ್ ವಾಹನದಲ್ಲಿ ಮಕ್ಕಳನ್ನು ಕ್ರೀಡಾಕೂಟಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಿರವಾರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಬೇಜವಾಬ್ದಾರಿತನದಿಂದಾದಗಿ ಸುಮಾರು 30 ವಿದ್ಯಾರ್ಥಿನಿಯರಿದ್ದ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿತ್ತು. ಬಹುತೇಕ ಎಲ್ಲ ವಿದ್ಯಾರ್ಥಿಗಳಿಗೆ ಗಾಯಗಳಾಗಿ, 4 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಬಳ್ಳಾರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಇಂದು ಎಸ್.ಐ.ಓ ಕರ್ನಾಟಕದ ರಾಜ್ಯ ಸಾರ್ವಜನಿಕ ಸಂಪರ್ಕ ಸಮಿತಿಯ ಸದಸ್ಯರಾದ ಅಬ್ದುಲ್ ಹನ್ನಾನ್ ರಾಯಚೂರು ದುರ್ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿರುವ ವಸತಿ ನಿಲಯಕ್ಕೆ ತೆರಳಿ ವಾರ್ಡನ್ ಬಳಿ ಮಾತನಾಡಿದರು.

ಈ ಬೇಜಾಬ್ದಾರಿಯ ಬಗ್ಗೆ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್.ಐ.ಓ ಕರ್ನಾಟಕ ಒತ್ತಾಯಿಸಿದೆ.

Leave a Comment